ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಅತಿ ಉದ್ದದ ಸಮುದ್ರ ಸೇತುವೆಯನ್ನು ಪ್ರಧಾನಿ ಮೋದಿ ಜನವರಿ 12 ರಂದು ಉದ್ಘಾಟಿಸಲಿದ್ದಾರೆ.
ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದ್ದು, ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿದ್ದಾರೆ.
ಸೆವ್ರಿ ಹಾಗೂ ರಾಯಗಢದ ನ್ಹವಾ ಶೇವಾ ಪ್ರದೇಶದ ನಡುವೆ ಸುಮಾರು 21.8ಕಿಮೀ ಉದ್ದದ ಸೇತುವೆ ಶೀಘ್ರವೇ ಲೋಕಾರ್ಪಣೆಯಾಗಲಿದೆ. ಇದರಿಂದಾಗಿ ಎರಡು ಗಂಟೆಗಳ ಪ್ರಯಾಣಿ 20 ನಿಮಿಷಗಳಲ್ಲಿ ಮುಗಿಯಲಿದೆ. ಈ ಸೇತುವೆಗೆ ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವಾ ಶೇವಾ ಅಟಲ್ ಸೇತು ಎಂದು ಕರೆಯಲಾಗುತ್ತಿದೆ.
2016ರಲ್ಲಿ ಭಾರೀ ಟೀಕೆಗೆ ಕಾರಣವಾಗಿದ್ದ ಈ ಸೇತುವೆ ನಿರ್ಮಾಣಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದರು. 2018ರಲ್ಲಿ ಕಾಮಗಾರಿ ಆರಂಭವಾಗಿತ್ತು. ಲಾಕ್‌ಡೌನ್ ಕಾರಣದಿಂದಾಗಿ ಜನವರಿ 12 ರಂದು ಸೇತುವೆ ಲೋಕಾರ್ಪಣೆಯಾಗಲಿದೆ. ಇದಕ್ಕೆ 16,904, 43 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಹೇಳಲಾಗಿದೆ.