ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಳ ಮೀಸಲಾತಿ ಹಂಚಿಕೆಗೆ ಜಾತಿ ಗಣತಿ ದತ್ತಾಂಶ ಬಳಸಲು ಪರಿಶೀಲನೆ ಮಾಡುತ್ತಾರೆ ಎಂದು ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಈಗಾಗಲೇ ನ್ಯಾ. ನಾಗಮೋಹನ್ ದಾಸ್ ಅವರಿಗೆ ಡೇಟಾ ಸಂಗ್ರಹಿಸಲು ಆದೇಶ ಮಾಡಲಾಗಿದೆ. ಆ ಡೇಟಾವನ್ನು ಜಾತಿ ಗಣತಿ ವರದಿಯೊಂದಿಗೆ ಹೋಲಿಕೆ ಮಾಡುತ್ತಾರೆ. ಜಾತಿ ಗಣತಿ ವರದಿ ಬಿಡುಗಡೆಯಾಗುವ ಮೊದಲೇ ಡೇಟಾ ಸಂಗ್ರಹಿಸಲು ಆದೇಶ ಮಾಡಿದ್ದೇವೆ. ಈಗ ವಾಪಸ್ ಪಡೆಯಲು ಆಗುವುದಿಲ್ಲ ಎಂದರು.
ಜಾತಿ ಗಣತಿ ವರದಿ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಸಚಿವರಿಗೆ ಹೇಳಿದ್ದಾರೆ. ಮೊನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲರು ಚರ್ಚೆಯಲ್ಲಿ ಭಾಗವಹಿಸಿದ್ದರು. ಚರ್ಚೆ ಮುಂದುವರಿದಿದ್ದು, ಅವರವರ ಅಭಿಪ್ರಾಯ ತಿಳಿಸಲಿದ್ದಾರೆ. ಎಲ್ಲರ ಅಭಿಪ್ರಾಯ ಕೇಳಿದ ಬಳಿಕ ಸರ್ಕಾರ ಅಂತಿಮ ತೀರ್ಮಾನ ತಗೆದುಕೊಳ್ಳಲಿದೆ. ಇದು ಒಬ್ಬರ ತೀರ್ಮಾನ ಆಗುವುದಿಲ್ಲ. ಕ್ಯಾಬಿನೆಟ್ ತೀರ್ಮಾನ ಆಗುತ್ತದೆ. ಇದು ಮುಖ್ಯಮಂತ್ರಿಯೊಬ್ಬರ ತೀರ್ಮಾನವೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
