ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್ಸಿಇಆರ್ಟಿ) ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ರಚಿಸಿರುವ ನೂತನ ಸಮಿತಿಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, ಸಂಗೀತ ನಿರ್ದೇಶಕ ಶಂಕರ್ ಮಹಾದೇವನ್ , ಅರ್ಥಶಾಸ್ತ್ರಜ್ಞ ಸಂಜೀವ್ ಸನ್ಯಾಲ್ ಸೇರಿದಂತೆ 19 ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
19 ಸದಸ್ಯರ ರಾಷ್ಟ್ರೀಯ ಪಠ್ಯಕ್ರಮ ಮತ್ತು ಬೋಧನಾ ಕಲಿಕಾ ಸಾಮಗ್ರಿ ಸಮಿತಿಗೆ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆ ಕುಲಪತಿ ಎಂಸಿ ಪಂತ್ ನೇತೃತ್ವ ವಹಿಸಲಿದ್ದಾರೆ. ಈ ಸಮಿತಿ 3 ರಿಂದ 12 ನೇ ತರಗತಿಗಳಿಗೆ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಿದೆ.
ಪಠ್ಯಪುಸ್ತಕಗಳು ಮತ್ತು ಇತರ ಬೋಧನಾ ಕಲಿಕಾ ಸಾಮಗ್ರಿಗಳ ಬಗ್ಗೆ ಈ ಸಮಿತಿ ತೀರ್ಮಾನ ಕೈಗೊಳ್ಳಲಿದ್ದು, ಇವುಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ನಿಯಮಗಳ ಪ್ರಕಾರ ಪ್ರಕಟಿಸಿ ಬಳಸುತ್ತದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
