ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಕಾಲ್ತುಳಿತಕ್ಕೆ ಕಾರಣರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕರ್ನಾಟಕ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ನಗರದ ಪೊಲೀಸ್ ಆಯುಕ್ತರು ಸೇರಿದಂತೆ ಹಲವಾರು ಉನ್ನತ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾರಕ ಕಾಲ್ತುಳಿತಕ್ಕೆ ಕಾರಣವಾದ ಲೋಪಗಳ ಬಗ್ಗೆ ತನಿಖೆ ನಡೆಸಲು ಏಕವ್ಯಕ್ತಿ ಆಯೋಗವನ್ನು ಘೋಷಿಸಿದರು.
“ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್, ಸ್ಟೇಷನ್ ಹೌಸ್ ಮಾಸ್ಟರ್, ಸ್ಟೇಷನ್ ಹೌಸ್ ಆಫೀಸರ್, ಎಸಿಪಿ, ಕೇಂದ್ರ ವಿಭಾಗದ ಡಿಸಿಪಿ, ಕ್ರಿಕೆಟ್ ಕ್ರೀಡಾಂಗಣದ ಉಸ್ತುವಾರಿ, ಹೆಚ್ಚುವರಿ ಪೊಲೀಸ್ ಆಯುಕ್ತರು, ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ” ಎಂದು ಮುಖ್ಯಮಂತ್ರಿ ಹೇಳಿದರು.
ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಮೈಕೆಲ್ ಡಿ’ಕುನ್ಹಾ ಅವರು ತನಿಖಾ ಸಮಿತಿಯ ನೇತೃತ್ವ ವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಘೋಷಿಸಿದರು.
“ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಮೈಕೆಲ್ ಡಿ’ಕುನ್ಹಾ ಅವರ ಅಧ್ಯಕ್ಷತೆಯಲ್ಲಿ, ನಾವು ಏಕವ್ಯಕ್ತಿ ಆಯೋಗವನ್ನು ನೇಮಿಸಿದ್ದೇವೆ… ಆರ್‌ಸಿಬಿ, ಈವೆಂಟ್ ಮ್ಯಾನೇಜರ್ ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಸಿದವರನ್ನು ಬಂಧಿಸಲು ನಾವು ನಿರ್ಧರಿಸಿದ್ದೇವೆ” ಎಂದು ತಿಳಿಸಿದ್ದಾರೆ.