ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಚುನಾವಣಾ ಆಯೋಗ ಇಂದು ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ದಿನಾಂಕ ಘೋಷಿಸಿದ್ದು, ಆದ್ರೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಉಪಚುನಾವಣೆ ದಿನಾಂಕ ಘೋಷಣೆ ಮಾಡಿಲ್ಲ.
ವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೊಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಮಾತ್ರ ಪ್ರಕಟಿಸಿದರು.ಈ ವೇಳೆ ಯಾವುದೇ ರಾಜ್ಯಗಳ ಉಪಚುನಾವಣೆ ಸದ್ಯಕ್ಕಿಲ್ಲ ಎಂದು ತಿಳಿಸಿದ್ದಾರೆ.
ಯಾವುದೇ ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭಾ ಉಪಚುನಾವಣೆ ಸದ್ಯಕ್ಕೆ ನಡೆಯುವುದಿಲ್ಲ. 46 ವಿಧಾನಸಭೆ ಹಾಗೂ ಲೋಕಸಭೆಯ 1 ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿತ್ತು. ಆದರೆ ಕೆಲ ರಾಜ್ಯಗಳಲ್ಲಿ ಹವಾಮಾನ ವೈಫರಿತ್ಯ, ಪ್ರಕೃತಿ ವಿಕೋಪ ಸಂಭವಿಸಿದೆ. ಅಸ್ಸಾಂ, ಬಿಹಾರ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರವಾಹ, ಭೂ ಕುಸಿತವುಂಟಾಗಿರುವುದರಿಂದ ಈ ಸಂದರ್ಭದಲ್ಲಿ ಆ ರಾಜ್ಯಗಳಲ್ಲಿ ಚುನಾವಣೆ ಸಾಧ್ಯವಿಲ್ಲ. ಪರಿಸ್ಥಿತಿ ಸುಧಾರಿಸಿದ ಬಳಿಕ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.