ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಖಾಂಡ್ ನ ಉತ್ತರಕಾಶಿಯಲ್ಲಿ ಸಿಲ್ಕ್ಯಾರಾ ಸುರಂಗದೊಳಗೆ ಸಿಕ್ಕಿಬಿದ್ದ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಬಹುತೇಕ ಯಶಸ್ವಿಯಾಗಿದ್ದು, ಕೆಲವೇ ಕ್ಷಣದಲ್ಲಿ 41 ಕಾರ್ಮಿಕರು ಹೊರಗೆ ಬರಲಿದ್ದಾರೆ.
ಸಿಬ್ಬಂದಿಗಳ ನಿರಂತರ ಕಾರ್ಯಾಚರಣೆಯಿಂದ ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲಿದ್ದಾರೆ. ಉತ್ತರಾಖಂಡದಲ್ಲಿ ಕುಸಿದ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಅಂತಿಮ ಹಂತದ ಕಾರ್ಯಾಚರಣೆ ನಡೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 40 ಆಂಬುಲೆನ್ಸ್, ವೈದ್ಯ ಸಿಬ್ಬಂದಿ ಗಳನ್ನು ನಿಯೋಜಿಸಲಾಗಿದೆ.
