ಹೊಸದಿಗಂತ ಡಿಜಿಟಲ್ ಡೆಸ್ಕ್ :
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ (ವಿಮೂಲ್) ದಲ್ಲಿ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 40 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜ ಆಹ್ವಾನಿಸಲಾಗಿದೆ.
ಸಹಾಯಕ ವ್ಯವಸ್ಥಾಪಕರು, ತಾಂತ್ರಿಕ ಅಧಿಕಾರಿ, ವಿಸ್ತರಣಾಧಿಕಾರಿ, ಕೆಮಿಸ್ಟ್, ಕಿರಿಯ ಸಿಸ್ಟಂ ಆಪರೇಟರ್, ಆಡಳಿತ ಸಹಾಯಕ, ಮಾರುಕಟ್ಟೆ ಸಹಾಯಕರು, ಕಿರಿಯ ತಾಂತ್ರಿಕ ಮತ್ತು ಹಾಲು ರವಾನೆಗಾರರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಈ ಹುದ್ದೆಗಳಿಗೆ ಬಿ.ವಿಎಸ್ಸಿ, ಬಿ.ಎಸ್ಸಿ, ಬಿ.ಟೆಕ್, ಯಾವುದೇ ಪದವಿ, ಬಿಸಿಎ, ಬಿ.ಕಾಂ, ಬಿಬಿಎ, ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆ ಜೊತೆಗೆ ಏಪ್ರಿಲ್ 25,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 21,400/- ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿದಾರರು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 25,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.