ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿಯ ಬೈಂದೂರಿನಲ್ಲಿ ಡಿವೈನ್ ಸ್ಟಾರ್ ಖ್ಯಾತಿಯ ನಟ ರಿಷಬ್ ಶೆಟ್ಟಿ ಮತ ಚಲಾಯಿಸಿದರು.
ಬೈಂದೂರಿನ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 135 ರಲ್ಲಿ ರಿಷಬ್ ಮತದಾನ ಮಾಡಿದರು.
ಬಳಿಕ ಮಾತನಾಡಿನ ನಟ ರಿಷಬ್ ಶೆಟ್ಟಿ ಲೋಕಸಭಾ ಚುನಾವಣೆ ನಡೆಯುವುದು ದೇಶಕ್ಕಾಗಿ, ನಾನು ದೇಶಕ್ಕೆ ಮತ ಹಾಕಿದ್ದೇನೆ. ಮತದಾನ ನಮ್ಮ ಹಕ್ಕು ಜವಾಬ್ದಾರಿ ಅದನ್ನು ಚಲಾಯಿಸಿದ್ದೇನೆ. ಜನ ಕಡಿಮೆ ಇರುತ್ತಾರೆ ಎಂದು ಸಂಜೆ ಬಂದಿದ್ದೇನೆ. ಸರ್ಕಾರದ ನಿರೀಕ್ಷೆ ಹಾಗೂ ಬೇಡಿಕೆ ಹಾಗೂ ರಾಜಕೀಯದ ಬಗ್ಗೆ ಮಾತನಾಡಲ್ಲ. ನನ್ನ ಜವಾಬ್ದಾರಿಯನ್ನು ಮಾಡಿದ್ದೇನೆ ಅಷ್ಟೇ ಎಂದರು.
ಚಿತ್ರೀಕರಣ ಮುಗಿಯುವವರೆಗೆ ಎಲ್ಲವೂ ಗೌಪ್ಯ
ಕಾಂತಾರ 2 ಚಿತ್ರದ ಬಗ್ಗೆಯೂ ಮಾತನಾಡಿರುವ ನಟ ರಿಷಬ್ ಶೆಟ್ಟಿ, ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಬಹಳ ಚೆನ್ನಾಗಿ ಕೆಲಸಕಾರ್ಯಗಳು ನಡೀತಾ ಇದೆ. ಮೊದಲಿಗಿಂತ ದೊಡ್ಡ ಜವಾಬ್ದಾರಿಯೊಂದಿಗೆ ದೊಡ್ಡ ತಂಡ ಕೆಲಸ ಮಾಡುತ್ತಿದೆ.
ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್ಗಳಿಗೆ ಒಂದು ಪುಣ್ಯ. ಕಾಂತರದಲ್ಲಿ ಅದ್ಭುತವಾದ ಟೆಕ್ನಿಷಿಯನ್ಸ್ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಕೆಲಸಗಳು ನಡೆಯುತ್ತಿದ್ದು ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ. ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ, ಹೀಗಾಗಿ ಮಾತಿನಲ್ಲಿ ಏನನ್ನು ಹೇಳುವುದಿಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ ಎಂದರು.
ಸಿನಿಮಾಗಾಗಿ ಒಂದು ವರ್ಷದಿಂದ ಗಡ್ಡ ಹಾಗೂ ಕೂದಲು ಬಿಟ್ಟಿದ್ದೇನೆ. ಚಿತ್ರೀಕರಣ ಪೂರ್ತಿ ಮುಗಿದ ಮೇಲೆ ಸೆಟ್ ವರ್ಕ್ ಚಿತ್ರೀಕರಣ ಸ್ಥಳಕ್ಕೆ ಕರೆಯುತ್ತೇವೆ. ಚಿತ್ರೀಕರಣ ಮುಗಿಯುವವರೆಗೆ ಬಹಳ ಗೌಪ್ಯತೆಯನ್ನು ಕಾಪಾಡಬೇಕಾಗುತ್ತದೆ. ಅಂತೆ ಕಂತೆಗಳ ಸುದ್ದಿ ಬಹಳಷ್ಟು ಹರಿದಾಡುತ್ತಿದೆ,ಆದರೆ ಚಿತ್ರದ ಬಗ್ಗೆ ಜನಕ್ಕೆ ನಿರೀಕ್ಷೆ ಹೋಗಬಾರದು. ಜನರು ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದರೆ ಒಳ್ಳೆಯದು. ಚಿತ್ರ ತೆರೆಗೆ ಬರುವ ತನಕ ಗೌಪ್ಯತೆ ಕಾಪಾಡಬೇಕು ಜನಕ್ಕೆ ಕುತೂಹಲ ಇರಬೇಕು ಎಂದರು.
