ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆರೆಯ ಆಂಧ್ರ, ತಮಿಳುನಾಡು, ತೆಲಂಗಾಣಗಳಿಗೆ ಹೋಲಿಸಿದರೆ ಬೆಂಗಳೂರು ಹಾಗೂ ಕರ್ನಾಟಕದ ಇತರೆ ಭಾಗಗಳಲ್ಲಿ ಟಿಕೆಟ್ ದರ ಬಹಳ ಹೆಚ್ಚಿದೆ.
ಪರಭಾಷೆಯ ಸಿನಿಮಾಗಳು ರಾಜ್ಯದಲ್ಲಿ ಬಿಡುಗಡೆ ಆದಾಗ ಟಿಕೆಟ್ ದರ ದುಪ್ಪಟ್ಟು ಮಾಡಿದ ಉದಾಹರಣೆಗಳೂ ಸಹ ಇವೆ. ಇದೀಗ ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಪಕ್ಕದ ರಾಜ್ಯಗಳಲ್ಲಿ ಚಿತ್ರಗಳಿಗೆ ಟಿಕೆಟ್ ದರ ಎಷ್ಟಿದೆ ಎಂದು ಪರಿಶೀಲನೆ ಮಾಡಿ ರಾಜ್ಯದಲ್ಲಿ ಅದಕ್ಕೆ ತಕ್ಕಂತೆ ಟಿಕೆಟ್ ದರಗಳನ್ನು ನಿಯಂತ್ರಣಕ್ಕೆ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದ್ದಾರೆ.
